ADVERTISEMENT

ಕಸಾಪ ಕನ್ನಡ ರಥ ವಿಜಯಪುರಕ್ಕೆ ನಾಳೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 11:29 IST
Last Updated 3 ಡಿಸೆಂಬರ್ 2022, 11:29 IST
ಹಾಸಿಂಪೀರ ವಾಲಿಕಾರ
ಹಾಸಿಂಪೀರ ವಾಲಿಕಾರ   

ವಿಜಯಪುರ:ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ‘ಕನ್ನಡ ಜ್ಯೋತಿ’ ಹೊತ್ತ ಕನ್ನಡ ರಥ ಜಾಥಾವು ನಗರಕ್ಕೆ ಡಿಸೆಂಬರ್‌ 5 ರಂದು ಸಂಜೆ 4ಕ್ಕೆ ಆಗಮಿಸಲಿದೆ ಎಂದುಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಹಣಮಂತರಾಯ ರಂಗಮಂದಿರದ ವರೆಗೆ ವಿವಿಧ ಜಾನಪದ ತಂಡಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ಸಂಜೆ 5.30ಕ್ಕೆ ಕನ್ನಡಪರ ನೃತ್ಯರೂಪಕಗಳು ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿವೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾ ಸಂಸ್ಥೆಗಳು, ಶ್ರೀಮಠಗಳು, ರೋಟರಿ ಕ್ಲಬ್, ಸ್ತ್ರೀಶಕ್ತಿ ಸಂಘಟನೆಗಳು, ಸಾಹಿತ್ಯಾಭಿಮಾನಿಗಳು ಪಾಲ್ಗೊಂಡು ಕನ್ನಡ ರಥಕ್ಕೆ ಭವ್ಯ ಸ್ವಾಗತ ಕೋರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.