
ಪ್ರಜಾವಾಣಿ ವಾರ್ತೆ
ವಿಜಯಪುರ: ನಗರದ ಕನಕದಾಸ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್‌ನ ವಿದ್ಯಾರ್ಥಿನಿಯರಾದ ಶಾರಿಕಾ ಖಾಜಿ ಹಾಗೂ ಪ್ರತೀಕ್ಷಾ ಮುಧೋಳ ಕಿತ್ತೂರು ಸೈನಿಕ ಶಾಲೆಗೆ 2026ನೇ ಸಾಲಿನ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿದ್ದಾರೆ.
ಪರೀಕ್ಷೆಗೆ ಕುಳಿತ ನಾಲ್ಕು ಮಕ್ಕಳಲ್ಲಿ ಎರಡು ಮಕ್ಕಳು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.