ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದಿಂದ ಮಹಾರಾಷ್ಟ್ರ ರಾಜ್ಯದ ರತ್ನಗಿರಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗಕ್ಕೆ ಸೇರಿದ ಬಸ್(ಕೆಎ 28 ಎಫ್ 2230) ರಾತ್ರಿ 1.30ಕ್ಕೆ ಕೊಲ್ಲಾಪುರದಿಂದ ಎರಡು ಕಿ.ಮೀ. ದೂರದಲ್ಲಿ ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿದ್ದು, ಬಸ್ ಸಂಪೂರ್ಣ ಮುಳುಗಿದೆ.
ಬಸ್‌ನಲ್ಲಿದ್ದ ಕರ್ನಾಟಕದ 10 ಮಂದಿ ಸೇರಿದಂತೆ ಅದರಲ್ಲಿದ್ದ 19 ಪ್ರಯಾಣಿಕರು ಹಾಗೂ ಚಾಲಕ ಶ್ರೀಶೈಲ ಬೊಲೆಗಾವ್, ನಿರ್ವಾಹಕ ಅಬ್ಬಾಸ್ ಅಲಿ ಅವರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎಂದು ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.