ವಿಜಯಪುರ: ‘ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋವಿಂದ ಪೂಜಾರಿ ಅವರನ್ನು ನಂಬಿಸಿ, ವಂಚಿಸಿದ ಪ್ರಕರಣದ ಹಿಂದೆ ಬಿಜೆಪಿ, ಆರ್‌ಎಸ್‌ಎಸ್ ಪ್ರಮುಖರು ಶಾಮೀಲಾಗಿದ್ದು, ಅವರ ಪತ್ತೆಗಾಗಿ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಒತ್ತಾಯಿಸಿದರು.
‘ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ, ಮುಖಂಡರಾದ ಸಿ.ಟಿ.ರವಿ, ಚಕ್ರವರ್ತಿ ಸೂಲಿಬೆಲೆ, ಶರಣ್ ಪಂಪ್‌ವೆಲ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
‘ಚೈತ್ರಾ ಕುಂದಾಪುರ ಪ್ರಖರ ವಾಗ್ಮಿ ಎಂದು ಬಿಂಬಿಸಿ, ಮುಸ್ಲಿಮರ ವಿರುದ್ಧ ಎತ್ತುಕಟ್ಟಲು ಬಿಜೆಪಿ, ಆರ್‌ಎಸ್‌ಎಸ್ ಸೇರಿ ಸಂಘಪರಿವಾರದ ಮುಖಂಡರು ಪ್ರಯತ್ನಿಸಿದ್ದಾರೆ. ಆದರೆ, ಈಗ ಸಂಘ, ಪಕ್ಷಕ್ಕೂ ಚೈತ್ರಾ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್ ನೀಡುವ ಪದ್ಧತಿ ಇರುವುದರಿಂದ ಚೈತ್ರ ಇಂಥ ಕೃತ್ಯಕ್ಕೆ ಕೈ ಹಾಕಿದ್ದು, ಇದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.