ADVERTISEMENT

ಸಿಎಂ, ಡಿಸಿಎಂರಿಂದ ಕೃಷ್ಣಾ ನದಿಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 9:23 IST
Last Updated 6 ಸೆಪ್ಟೆಂಬರ್ 2025, 9:23 IST
<div class="paragraphs"><p>ಸಿಎಂ, ಡಿಸಿಎಂರಿಂದ ಕೃಷ್ಣಾ ನದಿಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ</p></div>

ಸಿಎಂ, ಡಿಸಿಎಂರಿಂದ ಕೃಷ್ಣಾ ನದಿಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ

   

ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಆರನೇ ಬಾರಿಗೆ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಬಾಗಿನ ಅರ್ಪಣೆಗೂ ಮುನ್ನ ಗಂಗಾಪೂಜೆ ಸಲ್ಲಿಸಿ, ನಾಡಿನ ರೈತರ ಹಿತಕ್ಕಾಗಿ ಪ್ರಾರ್ಥಿಸಿದರು.

ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಯಶವಂತರಾಯಗೌಡ ಪಾಟೀಲ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಅಶೋಕ ಮನಗೂಳಿ, ಸಂಗಮೇಶ ಬಬಲೇಶ್ವರ ಮತ್ತೀತರರು ಇದ್ದರು.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯ ಆಯುಕ್ತ ಮೊಹಮ್ಮದ್ ಮೊಹಸಿನ್, ಕೆಬಿಜೆಎನ್ಎಲ್ ಎಂ.ಡಿ. ಕೆ.ಪಿ.ಮೋಹನರಾಜ್, ಬಿಟಿಡಿಎ ಮುಖ್ಯ ಎಂಜಿನಿಯರ್ ಡಿ.ಬಸವರಾಜ ಮತ್ತೀತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.