ADVERTISEMENT

ಭೂಸಂತ್ರಸ್ತರಿಗೆ ‘ಒಪ್ಪಿತ ದರ’ ನೀಡಲಾಗುವುದು: ಮುಖ್ಯಮಂತ್ರಿ ಸಿದ್ಧರಾಮಯ್ಯ

ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಾಗಿನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 23:30 IST
Last Updated 6 ಸೆಪ್ಟೆಂಬರ್ 2025, 23:30 IST
ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಬಾಗಿನ ಅರ್ಪಿಸಿದರು. ಸಚಿವ ಎಂ.ಬಿ.ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.
ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಬಾಗಿನ ಅರ್ಪಿಸಿದರು. ಸಚಿವ ಎಂ.ಬಿ.ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.   

ವಿಜಯಪುರ: ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದಲ್ಲಿ ಮುಳುಗಡೆಯಾಗುವ ರೈತರ ಭೂಮಿಗೆ ಒಪ್ಪಿತ ದರ (ಕನ್ಸೆಂಟ್ ಅವಾರ್ಡ್) ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನೊಂದು ವಾರದಲ್ಲಿ ಭೂ ಪರಿಹಾರ ಮೊತ್ತ ನಿಗದಿಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಶನಿವಾರ ಗಂಗಾಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಪರಿಹಾರ ಕೋರಿ ರೈತರು ಭವಿಷ್ಯದಲ್ಲಿ ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಯೋಜನೆ ಅನುಷ್ಠಾನಕ್ಕೆ ಹಿನ್ನಡೆಯಾಗುತ್ತದೆ’ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519 ಮೀಟರ್‌ನಿಂದ 524 ಮೀಟರ್‌ಗೆ ಎತ್ತರಿಸಲು ಅನುಕೂಲ ಆಗುವಂತೆ ಗೆಜೆಟ್‌ ಅಧಿಸೂಚನೆ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮತ್ತು ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯವಾಗಿದೆ’ ಎಂದರು.

ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಎಚ್.ವೈ. ಮೇಟಿ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಅಶೋಕ ಮನಗೂಳಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.