ADVERTISEMENT

ವಿಡಿಯೊ: ವಿಜಯಪುರ ನಗರದಲ್ಲಿ ಚಿರತೆ ಪ್ರತ್ಯಕ್ಷ! ಸೆರೆ ಕಾರ್ಯಾಚರಣೆ ಆರಂಭ

ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರನ್ನು ಆತಂಕ ಹುಟ್ಟಿಸಿದೆ.

​ಪ್ರಜಾವಾಣಿ ವಾರ್ತೆ
Published 6 ಜನವರಿ 2025, 5:23 IST
Last Updated 6 ಜನವರಿ 2025, 5:23 IST
ಚಿರತೆ
ಚಿರತೆ   

ವಿಜಯಪುರ: ನಗರದ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರನ್ನು ಆತಂಕ ಹುಟ್ಟಿಸಿದೆ.

ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಂದಗಿ ನಾಕಾ, ಮುನೇಶ್ವರಭಾಗ್ ಪ್ರದೇಶದ ಜನರು ಆತಂಕದಿಂದ ಮನೆಯಿಂದ ಹೊರ ಬರಲು ಅಂಜುತ್ತಿದ್ದಾರೆ.

ಚಿರತೆಯನ್ನು ಸೆರೆ ಹಿಡಿಯಬೇಕೆಂದು‌ ಜನರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜನರು ಸುರಕ್ಷಿತ ಕ್ರಮ‌ ತೆಗೆದುಕೊಳ್ಳುವಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

ADVERTISEMENT

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.