ADVERTISEMENT

ಸಿಎಂ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ; ಶಾಸಕ ಯತ್ನಾಳ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 13:15 IST
Last Updated 17 ಆಗಸ್ಟ್ 2024, 13:15 IST
<div class="paragraphs"><p> ಶಾಸಕ ಯತ್ನಾಳ</p></div>

ಶಾಸಕ ಯತ್ನಾಳ

   

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಟ್ವಿಟ್ ಮಾಡಿದ್ದಾರೆ.

ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು, ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯಮಂತ್ರಿಗಳು ತನಿಖೆ ಎದುರಿಸಬೇಕು. ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮೂಲಕ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.