ADVERTISEMENT

‘ಲಿಂಗಾಯತ ಮಠಗಳ ಸೇವೆ ಅನನ್ಯ’

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 13:55 IST
Last Updated 30 ಆಗಸ್ಟ್ 2021, 13:55 IST
ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಬಸವ ಜಯಂತಿಯ ಪ್ರಯುಕ್ತವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು 
ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಬಸವ ಜಯಂತಿಯ ಪ್ರಯುಕ್ತವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು    

ವಿಜಯಪುರ: ಲಿಂಗಾಯತ ಮಠಗಳು ಶಿಕ್ಷಣ ಪ್ರಸಾರದಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಿವೆ ಎಂದು ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ. ನಾಗಠಾಣ ಹೇಳಿದರು.

ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಡಾ. ರಾಜೇಂದ್ರ ಮಹಾಸ್ವಾಮಿಗಳ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಧರ್ಮ, ಆಧ್ಯಾತ್ಮ, ಸಾಹಿತ್ಯ, ಸಂಸ್ಕೃತಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಲಿಂಗಾಯತ ಮಠಗಳು ಅನುಪಮ ಸೇವೆ ಸಲ್ಲಿಸಿವೆ ಎಂದರು.

ADVERTISEMENT

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷಜಂಬುನಾಥ ಕಂಚ್ಯಾಣಿ ಮಾತನಾಡಿ, ವಚನಗಳಲ್ಲಿನ ತತ್ವ ಸಿದ್ದಾಂತಗಳನ್ನು ಪ್ರಸಾರ ಹಾಗೂ ಅನುಷ್ಠಾನಗೊಳಿಸುವುದಕ್ಕಾಗಿ ಶರಣ ಸಾಹಿತ್ಯ ಪರಿಷತ್‌ ಶ್ರಮಿಸುತ್ತಿದೆ ಎಂದರು.

ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮ.ಗು. ಯಾದವಾಡ, ದಾಸೋಹಿ ಬಿ.ಎಚ್. ಬಾದರಬಂಡಿ,ಆರ್.ಎಸ್. ಪಟ್ಟಣಶೆಟ್ಟಿ, ಯಮನೂರಪ್ಪ ಅರಬಿ, ದಾಕ್ಷಾಯಣಿ ಬಿರಾದಾರ, ರಾಜಶೇಖರ ಉಮರಾಣಿ, ಡಾ. ಬಿ.ಎಸ್. ಪಡಗಾನೂರ, ಎಸ್.ವೈ. ಗದಗ, ಎಂ.ಐ. ಕುಮಟಗಿ, ಎಂ.ಎಂ. ಅಂಗಡಿ, ಡಾ. ವಿ.ಡಿ. ಐಹೊಳ್ಳಿ, ಡಾ. ಉಷಾ ಹಿರೇಮಠ, ಕಮಲಾಕ್ಷಿ ಮುರಾಳ, ಅಮರೇಶ ಸಾಲಕ್ಕಿ, ಶಿವಾಜಿ ಮೋರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.