ADVERTISEMENT

ಮುದ್ದೇಬಿಹಾಳ | ಲೋಕ ಅದಾಲತ್: 1544 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:15 IST
Last Updated 13 ಜುಲೈ 2024, 16:15 IST
ಮುದ್ದೇಬಿಹಾಳ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಲಾಯಿತು
ಮುದ್ದೇಬಿಹಾಳ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಲಾಯಿತು   

ಮುದ್ದೇಬಿಹಾಳ: ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿತ್ತು.

ಲೋಕ ಅದಾಲತ್‌ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 6380 ಬಾಕಿ ಇರುವ ಪ್ರಕರಣಗಳಲ್ಲಿ 2388 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ ಒಟ್ಟು 1544 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಕರಣಗಳಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್‌ಎಸಿ ಇ.ಪಿ ಪ್ರಕರಣಗಳು, ಎಂ.ವಿ.ಸಿ, ಇ.ಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು ಹಾಗೂ ಅಬಕಾರಿ ಇಲಾಖೆಯ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು.

ADVERTISEMENT

ಪೂರ್ವದಾವೆ ಪ್ರಕರಣಗಳಲ್ಲಿ ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಅಬಕಾರಿ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು, ಒಟ್ಟು ಸೇರಿ 1942 ಪ್ರಕರಣಗಳಲ್ಲಿ 749 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ.

ಪ್ರಕರಣಗಳನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು, ನ್ಯಾಯಾಧೀಶರಾದ ರವೀಂದ್ರಕುಮಾರ ಬಿ. ಕಟ್ಟಿಮನಿ ಹಾಗೂ ಸದಸ್ಯ ಕಾರ್ಯದರ್ಶಿ ಸಂಪತಕುಮಾರ ಬಳೂಲಗಿಡದ ಅವರು ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿದರು.

ನ್ಯಾಯಾಂಗ ಸಂಧಾನಕಾರರಾಗಿ ಸರ್ಕಾರಿ ವಕೀಲರಾದ ಎಚ್.ಜಿ. ನಾಗೋಡ, ಯಮನಪ್ಪ, ಬಸವರಾಜ ಆಹೇರಿ ಹಾಗೂ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ವಕೀಲರು, ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.