
ಮುದ್ದೇಬಿಹಾಳ: ಇಲ್ಲಿನ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 7741 ಬಾಕಿ ಇರುವ ಪ್ರಕರಣಗಳಲ್ಲಿ 2316 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 1533 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ ಗಳು, ಮೆಂಟೆನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ ಇಪಿ ಪ್ರಕರಣಗಳು, ಎಂವಿಸಿ, ಇಪಿ ಪ್ರಕರಣ, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು.
ಮತ್ತು ಪೂರ್ವದಾವೆ ಪ್ರಕರಣಗಳಲ್ಲಿ, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು ಒಟ್ಟು ಸೇರಿ 965 ಪ್ರಕರಣಗಳಲ್ಲಿ 204 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ.
ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಸಚಿನ್ ಕೌಶಿಕ್, ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ, ಸಿವಿಲ್ ನ್ಯಾಯಾಧೀಶ ರಾಮಮೂರ್ತಿ.ಎನ್.ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಸಂಧಾನಕಾರರಾಗಿ ವಕೀಲರಾದ ಎನ್.ಬಿ.ಮುದ್ನಾಳ, ರವಿ ನಾಲತವಾಡ, ರಶ್ಮಿ.ಬಿ.ಕುಲಕರ್ಣಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ ಹಾಗೂ ನ್ಯಾಯಾಲಯದ ಸಿಬ್ಬಂದಿ, ಹಿರಿಯ, ಕಿರಿಯ ವಕೀಲರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.