ವಿಜಯಪುರ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಆಗಸ್ಟ್ 8 ರಿಂದ 11ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಯ ಸಮಗ್ರ, ಪೂರಕ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತರು ಪ್ರವಾಸದ ವೇಳೆ ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಸಡೆಸಲಿದ್ದಾರೆ ಎಂದರು.
ಎಲ್ಲಾ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ದಿನಚರಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಕ್ಷೇತ್ರ ಭೇಟಿ ಹೊರತಾಗಿ ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರ್ಪವಾಗಿ ಅನುಷ್ಠಾನಗೊಳಿಸಿ, ಅರ್ಹರಿಗೆ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.