ADVERTISEMENT

ವಿಜಯಪುರ: ಆರ್‌ಟಿಓ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 5:01 IST
Last Updated 27 ಮಾರ್ಚ್ 2024, 5:01 IST
   

ವಿಜಯಪುರ: ಇಲ್ಲಿನ ಚಾಲುಕ್ಯ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪರಿಶೀಲನೆ ನಡೆದಿದೆ.

ಷಣ್ಮುಖಪ್ಪ ನಿವಾಸ ಸೇರಿದಂತೆ ವಿಜಯಪುರ ನಗರದಲ್ಲಿರುವ ಅವರ ಸಂಬಂಧಿಕರ ನಿವಾಸಗಳ ಮೇಲೂ ದಾಳಿ ನಡೆದಿದೆ.

ADVERTISEMENT

ಲೋಕಯುಕ್ತ ಡಿಎಸ್ಪಿ ಸುರೇಶ ರೆಡ್ಡಿ, ಇನ್‌ಸ್ಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ‌ ದಾಳಿಯಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.