ADVERTISEMENT

ವಿಜಯಪುರ: ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್‌

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 6:13 IST
Last Updated 11 ಡಿಸೆಂಬರ್ 2025, 6:13 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ವಿಜಯಪುರ: ಸಮುದಾಯ ಭವನ ನಿರ್ಮಾಣ ಕಾಮಗಾರಿ ಬಿಲ್‌ ಮಂಜೂರು ಮಾಡಲು ₹6 ಸಾವಿರ ಲಂಚ ತೆಗೆದುಕೊಳ್ಳುವಾಗ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ವಿಜಯಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.

ADVERTISEMENT

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ 2023–24ನೇ ಸಾಲಿನ ಅನುದಾನದಲ್ಲಿ ವಿಜಯಪುರ ತಾಲ್ಲೂಕಿನ ಕತಕನಹಳ್ಳಿ ಗ್ರಾಮದ ಶ್ರೀ ಮರಗಮ್ಮ(ದುರ್ಗಾದೇವಿ) ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಬಿಲ್‌ ಮಂಜೂರು ಮಾಡಲು ಕಾಮಗಾರಿಯ ದಾಖಲಾತಿಗಳಿಗೆ ಸಹಿ ಮಾಡಿ ಕೊಡಲು ₹6 ಲಕ್ಷ ಲಂಚ ತೆಗೆದುಕೊಳ್ಳುವಾಗ ಕಿರಿಯ ಎಂಜಿನಿಯರ್‌ ವಿಷ್ಣು ಪೋಳ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಟಿ.ಮಲ್ಲೇಶ ಮಾರ್ಗದರ್ಶನದಲ್ಲಿ ಪೊಲೀಸ್‌ ಉಪ ಅಧೀಕ್ಷಕ ಮಲ್ಲಿಕಾರ್ಜುನ ತುಳಸಿಗೇರಿ, ಪೊಲೀಸ್‌ ಇನ್‌ ಸ್ಪೆಕ್ಟರ್‌ ಆನಂದ ಟಕ್ಕನ್ನವರ, ಆನಂದ ಡೋಣಿ, ನಿಂಗಪ್ಪ ಪೂಜೇರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.