
ಪ್ರಜಾವಾಣಿ ವಾರ್ತೆಮಗಳ ಚುನಾವಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವುದನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಶಿವಾನಂದ ಪಾಟೀಲ ಸವಾಲು ಹಾಕಿದರು. ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಕೇಳಿರುವುದನ್ನು ಸಾಬೀತು ಮಾಡಬೇಕು. ಇಲ್ಲವೇ ಅವರು ರಾಜಕೀಯದಿಂದ ನಿವೃತ್ತರಾಗಬೇಕು ಎಂದರು. ಚಿಲ್ಲರೆ ರಾಜಕಾರಣ ಮಾಡಲು ನನಗೆ ಬರುವುದಿಲ್ಲ. ಬಿಜೆಪಿ ಅನ್ನು ಹೆಚ್ಚು ಬೈದವರು ಯಾರಾದರೂ ಇದ್ದರೆ, ಅವರು ಯತ್ನಾಳ ಮಾತ್ರ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.