ADVERTISEMENT

ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸಚಿವ ಪಾಟೀಲ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 15:49 IST
Last Updated 3 ಏಪ್ರಿಲ್ 2024, 15:49 IST
   

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಮಗುವೊಂದು ಪಾಳು ಕೊಳವೆ ಬಾವಿಗೆ ಬಿದ್ದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಜತೆಗೆ ಮಗುವನ್ನು ರಕ್ಷಿಸಲು ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದು, ಆ ಬಗ್ಗೆ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಸೂಕ್ತ ನಿರ್ದೇಶನ ನೀಡಿದರು.

ಮಗುವನ್ನು ರಕ್ಷಿಸಲು ನಿಗಾ ವಹಿಸಿ ಕಲಸ ಮಾಡಲು ಅವರು ಸೂಚಿಸಿದ್ದು, ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.