ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ‘ದೇಶಪ್ರೇಮಿಗಳೆಂದು ಹೇಳಿಕೊಳ್ಳುವ ಬಿಜೆಪಿಯವರೇ ನಿಜವಾದ ದ್ವೇಷಪ್ರೇಮಿಗಳು. ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.
ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಶನಿವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಸಂವಿಧಾನ ಪೀಠಿಕೆಯನ್ನು ಹೇಳಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ. ನಿತ್ಯ 1.08 ಕೊಟಿ ಮಕ್ಕಳು ಸಂವಿಧಾನ ಪೀಠಿಕೆ ಓದುತ್ತಾರೆ. ಇದು ಬಿಜೆಪಿಯವರಿಗೆ ಆಗಿ ಬರಲ್ಲ. ಬಿಜೆಪಿ ಎಂದರೆ ಬ್ರಿಟಿಷ್ ಜನತಾ ಪಾರ್ಟಿ. ಜಾತಿ, ಧರ್ಮ ಪ್ರಾಂತ್ಯದ ಆಧಾರದ ಮೇಲೆ ರಾಜಕಾರಣ ಮಾಡುತ್ತಾರೆ’ ಎಂದರು.
‘ನನ್ನನ್ನು ಗ್ಯಾರಂಟಿಯ ಪ್ರಣಾಳಿಕೆಯ ಸಮಿತಿಯ ಉಪಾಧ್ಯಕ್ಷನನ್ನಾಗಿ ನೇಮಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗ್ಯಾರಂಟಿಗಳ ಸರದಾರ. ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಬಿಜೆಪಿ ಕುಟುಂಬದವರು ಅರ್ಜಿ ಹಾಕಿದ್ದಾರೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.