ADVERTISEMENT

ಮಹಿಳಾ ವಿವಿ ಘಟಿಕೋತ್ಸವ 19ಕ್ಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 18:53 IST
Last Updated 16 ಸೆಪ್ಟೆಂಬರ್ 2020, 18:53 IST

ವಿಜಯಪುರ: ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವಸೆ.19ರಂದು ಬೆಳಿಗ್ಗೆ 11ಕ್ಕೆ ಜ್ಞಾನಶಕ್ತಿ ಆವರಣದ ಆಡಳಿತ ಭವನದ ಎದುರಿನ ಸಭಾಂಗಣದಲ್ಲಿ ನಡೆಯಲಿದೆ’ ಎಂದು ವಿವಿ ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಹೇಳಿದರು.

‘ಕೊರೊನಾ ಕಾರಣಕ್ಕಾಗಿ ಈ ಬಾರಿ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯರು ಹಾಗೂ ಪಿಎಚ್‍.ಡಿ ಪದವೀಧರರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 9,371 ಒಟ್ಟು ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನವದೆಹಲಿಯ ವಿಶ್ವವಿದ್ಯಾಲಯ ಅನುದಾನ ಆಯೋಗ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್ ಅವರು ಆನ್‌ಲೈನ್‌ನಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದುಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಘಟಿಕೋತ್ಸವವನ್ನು ಅಕ್ಕ ಟಿವಿ ಯುಟ್ಯೂಬ್ ನ್ಯೂಸ್‍ ಚಾನೆಲ್ ಮತ್ತು ಕೆಎಸ್‍ಡಬ್ಲ್ಯುಯು ಮೀಡಿಯಾ ಸೆಲ್ ಫೇಸ್‍ಬುಕ್ ಲೈವ್ ಮೂಲಕ ವೀಕ್ಷಿಸಬಹುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.