ADVERTISEMENT

ಮಹಾಂತೇಶ ಚೌಲಗಿ ನ್ಯಾಯಾಧೀಶರಾಗಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 14:32 IST
Last Updated 18 ಜನವರಿ 2023, 14:32 IST
ಮಹಾಂತೇಶ ಚೌಲಗಿ
ಮಹಾಂತೇಶ ಚೌಲಗಿ   

ತಿಕೋಟಾ: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿ ಗ್ರಾಮದ ಮಹಾಂತೇಶ ರಾಯಪ್ಪ ಚೌಲಗಿ ಕರ್ನಾಟಕದ ಹೈಕೋರ್ಟ್‌ ನ್ಯಾಯಾಧೀಶರಾಗಿ(ಸಿವಿಲ್‌ ಜಡ್ಜ್‌) ಆಯ್ಕೆಯಾಗಿದ್ದಾರೆ.

ಕೃಷಿ ಕುಟುಂಬದಿಂದ ಬಂದಿರುವ ಚೌಲಗಿ ಅವರು, ಕೊಟ್ಟಲಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ತೆಲಸಂಗ ಗ್ರಾಮದ ಮಹಾತ್ಮ ಗಾಂಧೀಜಿ ಮಹಾವಿದ್ಯಾಲಯದಲ್ಲಿ ಪಿಯುಸಿ, ಅಥಣಿಯ ಕೆ.ಎ ಲೋಕಾಪುರ ಕಾಲೇಜಿನಲ್ಲಿ ಬಿಎ ಪದವಿ, ಬೆಳಗಾವಿಯ ರಾಜಾ ಲಕ್ಕಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಎಲ್ಎಲ್‌ಬಿ ಪದವಿ ಪಡೆದುಕೊಂಡಿದ್ದಾರೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಮಹಾಂತೇಶ, ಹೈಕೋರ್ಟ್‌ ನ್ಯಾಯಾಧೀಶನಾಗಿ ಆಯ್ಕೆಯಾಗಿದ್ದು ಖುಷಿಯಾಗಿದೆ. ಸಮಾಜಕ್ಕೆ ನ್ಯಾಯ ಕೊಡಿಸುವ ಜೊತೆಗೆ ಸಮಾಜ ಸೇವೆ ಮಾಡುತ್ತೇನೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.