ADVERTISEMENT

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 12:33 IST
Last Updated 29 ಸೆಪ್ಟೆಂಬರ್ 2025, 12:33 IST
<div class="paragraphs"><p>ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ.</p></div>

ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ.

   

ಸೋಲಾಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಸೀನಾ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ. ಪರಿಣಾಮ ವಾಹನಗಳ ಸಂಚಾರ ಬಂದ್ ಆಗಿದೆ.

ಅಂತರರಾಜ್ಯ ಸಂಪರ್ಕ ಕಡಿತವಾಗಿದ್ದು, ಹೆದ್ದಾರಿಯಲ್ಲೇ ಸಾವಿರಾರರು ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿ ಬಂದ್‌ ಆಗಿರುವುದರಿಂದ ಸೋಲಾಪುರದಿಂದ ವಿಜಯಪುರಕ್ಕೆ ಬರುವ, ಹೋಗುವ ವಾಹನಗಳು ಮಂಗಳವೇಡೆ ಮಾರ್ಗವಾಗಿ ಕಾಮತಿ, ಮಂದ್ರೂಪ್‌, ತೇರಮೈಲ್‌ ಮೂಲಕವಾಗಿ ಸುತ್ತಿಬಳಸಿ ಸುಮಾರು 40 ಕಿ.ಮೀ.ಹೆಚ್ಚುವರಿ ಸಂಚರಿಸಬೇಕಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.