ADVERTISEMENT

ಮಲ್ಲಗಂಬ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2025, 6:02 IST
Last Updated 24 ಅಕ್ಟೋಬರ್ 2025, 6:02 IST
ಮಹೇಶ ಚಿಮ್ಮಲಗಿ
ಮಹೇಶ ಚಿಮ್ಮಲಗಿ   

ಪ್ರಜಾವಾಣಿ ವಾರ್ತೆ

ವಿಜಯಪುರ: ಇತ್ತೀಚೆಗೆ ವಿಜಯಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಲ್ಲಗಂಬ ಸ್ಪರ್ಧೆಯಲ್ಲಿ ಮುಳವಾಡ ಗ್ರಾಮದ ಶಿವರಾಯ ಶಾಲೆಯ ವಿದ್ಯಾರ್ಥಿ ಮಹೇಶ ಚಿಮ್ಮಲಗಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಹೇಶ 90ಸೆಕೆಂಡ್ ನಲ್ಲಿ 11 ಆಸನಗಳನ್ನು ಮಾಡುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾನೆ. ಇದೇ ತಿಂಗಳ ಕೊನೆಯಲ್ಲಿ ಗದಗದಲ್ಲಿ ನಡೆಯುವ ರಾಜ್ಯ ಮಟ್ಟದ ಮಲ್ಲಗಂಬ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.

ADVERTISEMENT

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಅಧ್ಯಕ್ಷ, ಸಿಬ್ಬಂದಿ ವರ್ಗ ಮತ್ತು ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.