ವಿಜಯಪುರ: ವ್ಯಕ್ತಿಯೊಬ್ಬ ಯುವತಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ನಾಗಠಾಣ ಗ್ರಾಮದಲ್ಲಿ ಸೋಮವಾರ ನಡೆದಿದೆ.
ನಾಗಠಾಣದ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಯುವತಿಯನ್ನು ಚುಡಾಯಿಸಿದ ಕಾರಣಕ್ಕೆ ಶ್ರೀಶೈಲ ಮಸಳಿ ಎಂಬಾತನಿಗೆ ಯುವತಿ ಚಪ್ಪಲಿ ತೋರಿಸಿದ್ದಾಳೆ. ಇದರಿಂದ ಕುಪಿತನಾದ ಶ್ರೀಶೈಲ, ಕಂಪ್ಯೂಟರ್ ತರಬೇತಿ ಕೇಂದ್ರದ ಒಳಹೊಕ್ಕು ಯುವತಿಯನ್ನು ಹೊರಗೆ ಎಳೆದುತಂದು ಚಪ್ಪಲಿಯಿಂದ ಹೊಡೆದು, ಕಾಲಿನಿಂದ ಒದ್ದಿದ್ದಾನೆ. ಸಾರ್ವಜನಿಕರು ತಪ್ಪಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಈ ಸಂಬಂಧ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಯುವತಿಯ ಪೋಷಕರು ಆಗ್ರಹಿಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.