ADVERTISEMENT

ವಿಜಯಪುರ: ಚಲಿಸುತ್ತಿದ್ದ ರೈಲಿನಡಿಗೆ ಜಿಗಿದು ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 12:56 IST
Last Updated 22 ಮಾರ್ಚ್ 2024, 12:56 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ವಿಜಯಪುರ: ನಗರದ ಇಬ್ರಾಹಿಂಪುರ ಬಳಿ ಶುಕ್ರವಾರ ಮಧ್ಯಾಹ್ನ ಯುವಕನೊಬ್ಬ ರೈಲು ಬರುವ ವೇಳೆ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈಲಿನಡಿ ಸಿಲುಕಿದ ಯುವಕನ ದೇಹ ಛಿದ್ರ, ಛಿದ್ರವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿಲ್ಲ.

ADVERTISEMENT

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಯುವಕನ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ, ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.