ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಪತಿಯೇ ತನ್ನ ಹೆಂಡತಿಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ನಾಗಮ್ಮ ( 60 ) ಪತಿಯಿಂದ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಯಲ್ಲಪ್ಪ ( 65) ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮನೆಯಲ್ಲಿ ಕೆಲಸ ಮಾಡುವ ವಿಷಯವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಸ್ಥಳಕ್ಕೆ ಬಸವನಬಾಗೇವಾಡಿ ಸಿಪಿಐ ಸೋಮಶೇಖರ್ ಜುಟ್ಟಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಪ್ಪನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.