ADVERTISEMENT

ಮಾದಾರ ಚೆನ್ನಯ್ಯ ಸಮುದಾಯ ಭವನ ಸದ್ಭಳಕೆಯಾಗಲಿ: ಕಾರಜೋಳ

ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 13:32 IST
Last Updated 6 ಮಾರ್ಚ್ 2023, 13:32 IST
ವಿಜಯಪುರ ನಗರದ ಖಾಜಾ ಅಮೀನ್‌ ದರ್ಗಾ ಹತ್ತಿರದಲ್ಲಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಸೋಮವಾರ ಉದ್ಘಾಟಿಸಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೊಳ ಮಾತನಾಡಿದರು–ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಖಾಜಾ ಅಮೀನ್‌ ದರ್ಗಾ ಹತ್ತಿರದಲ್ಲಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಸೋಮವಾರ ಉದ್ಘಾಟಿಸಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೊಳ ಮಾತನಾಡಿದರು–ಪ್ರಜಾವಾಣಿ ಚಿತ್ರ   

ವಿಜಯಪುರ: ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತ ಹಾಗೂ ಕೆಆರ್‌ಐಡಿಎಲ್ ವತಿಯಿಂದ ನಗರದ ವಾರ್ಡ್‌ ನಂ.2 ಆಶ್ರಯ ಕಾಲೊನಿಯ ಖಾಜಾ ಅಮೀನ್‌ ದರ್ಗಾ ಹತ್ತಿರದಲ್ಲಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಸೋಮವಾರ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೊಳ ಉದ್ಘಾಟಿಸಿದರು.

ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ₹ 3.55 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಭವನವನ್ನು ಅತ್ಯುತ್ತಮವಾಗಿ ನಿರ್ವಹಿಸಿಕೊಂಡು ಹೋಗಬೇಕು. ಎಲ್ಲ ಸಮಾಜದ ಉಪಯೋಗ ಕಲ್ಪಿಸುವ ದೃಷ್ಟಿಯಿಂದ ಭವನ ನಿರ್ಮಿಸಲಾಗಿದ್ದು, ಈ ಭವನದದಲ್ಲಿ ಎಲ್ಲ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಾರಜೋಳ ಹೇಳಿದರು.

ಭವನದಲ್ಲಿ ಮುಖ್ಯವಾಗಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಭವನ ಸ್ವಚ್ಛ ಸುಂದರವಾಗಿಡಬೇಕು. ಈ ಭವನದ ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಎಲ್ಲ ಸಮಾಜದ ಮೇಲಿದ್ದು, ಒಗ್ಗಟ್ಟಾಗಿ ಭವನ ನಿರ್ವಹಣೆ ಮಾಡುವಂತೆ ಸಲಹೆ ನೀಡಿದರು.

ADVERTISEMENT

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸಮುದಾಯ ಭವನ ನಿರ್ಮಾಣ ಮಾಡುವುದರ ಮೂಲಕ ಸರ್ಕಾರ ಸಮುದಾಯಕ್ಕೆ ನೀಡಿದ ಕೊಡುಗೆಯಾಗಿದೆ. ಈ ಭವನ ನಿರ್ಮಾಣದಿಂದ ಎಲ್ಲ ಸಮುದಾಯದವರ ಕಾರ್ಯಕ್ರಮಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸ್ವಾವಲಂಬನೆ ಜೀವನ ನಿರ್ವಹಿಸಲು ಅವರ ಆರ್ಥಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಗೂಡ್ಸ್ ವಾಹನ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದರು.

ನಗರದಲ್ಲಿ ಎಲ್ಲಾ ಸಮುದಾಯಗಳಿಗೆ ಭವನ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ರಸ್ತೆ ಸುಧಾರಣೆ ಪೂರ್ಣಗೊಳ್ಳುತ್ತಿವೆ. ಪ್ರತಿಯೊಂದು ರಸ್ತೆಗಳಿಗೆ ದೇಶಭಕ್ತರ ಹೆಸರುಗಳು ಇಡಲಾಗಿದೆ. ನಗರದಲ್ಲಿ ಸುಮಾರು 11 ಮಹನೀಯರ ಮೂರ್ತಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯರು ಅಲ್ತಾಫ್‌ ಇಟಗಿ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್‌ಪಿ ಸಿದ್ದೇಶ್ವರ, ಕೆಆರ್‌ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಮ್ಮರಾಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮಗನೌಡ ಕನ್ನೊಳ್ಳಿ, ತಹಶೀಲ್ದಾರ ಸುರೇಶ ಮುಂಜೆ, ಸಮಾಜದ ಮುಖಂಡರಾದ ವಿನೋದಕುಮಾರ್‌, ಸಾಯಿಕುಮಾರ ಬಿಸನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.