ADVERTISEMENT

370ನೇ ವಿಧಿ ರದ್ದತಿ ಕುರಿತು ಪ್ರತಿಕ್ರಿಯಿಸುವುದಿಲ್ಲ: ಎಂ.ಬಿ.ಪಾಟೀಲ 

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 10:11 IST
Last Updated 5 ಆಗಸ್ಟ್ 2019, 10:11 IST
ಎಂ.ಬಿ.ಪಾಟೀಲ 
ಎಂ.ಬಿ.ಪಾಟೀಲ    

ವಿಜಯಪುರ: ‘ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಅನ್ನು ರದ್ದು ಪಡಿಸಿರುವ ವಿಷಯ ಅತ್ಯಂತ ಸೂಕ್ಷ್ಮವಾಗಿದೆ. ಹೀಗಾಗಿ ಈ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಲಾರೆ’ ಎಂದು ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇದರ ಸಾಧಕ – ಬಾಧಕಗಳನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ. ಕೇಂದ್ರದ ಈ ನಿರ್ಧಾರದ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡರು ಕೂಲಂಕಷವಾಗಿ ಚರ್ಚಿಸಲಿದ್ದಾರೆ. ಕಾಂಗ್ರೆಸ್ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅದರ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ’ ಎಂದು ತಿಳಿಸಿದರು.

ಕೇಂದ್ರದ ನಿರ್ಧಾರಕ್ಕೆ ವಿಜಯೋತ್ಸವ
ಯಾದಗಿರಿ:
ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರ ನಿರ್ಧಾರದ ಹಿನ್ನೆಲೆಯಲ್ಲಿ ನಗರದ ಗಾಂಧಿವೃತ್ತದಲ್ಲಿ ಬಿಜೆಪಿ, ವಿಶ್ವ ಹಿಂದು ಪರಿಷತ್, ಶ್ರೀರಾಮ ಸೇನೆ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು.

ADVERTISEMENT

ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ಕಾರ್ಯಕರ್ತರಿಂದ ಶ್ಲಾಘನೆ ವ್ಯಕ್ತವಾಯಿತು. ಪ್ರಧಾನಿ ಮೋದಿ ಪರ ಘೋಷಣೆ ಕೂಗಿದರು.

ಸಾಯಿಬಣ್ಣ ಚಂಡ್ರಿಕಿ, ಅಂಬಯ್ಯ ಶಾಬಾದಿ, ಅಶ್ವಿನ್ ಪಾಂಚಾರ್ಯ, ಮಲ್ಲು ಚಾಪಲ್, ಆಂಜನೇಯ ಭಂಗಿ, ರೂಪೇಶ್ ಪಾಂಚಾರ್ಯ, ಶಿವರಾಜ್ ಸ್ವಾಮಿ, ಆಕಾಶ್ ಬಿರನೂರ್ ಇದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.