ADVERTISEMENT

ಕೋವಿಡ್ ತಡೆಗೆ ಲಸಿಕೆಯೊಂದೇ ಶಾಶ್ವತ ಪರಿಹಾರ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಮೇ 2021, 9:51 IST
Last Updated 26 ಮೇ 2021, 9:51 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ಕೊರೊನಾದಿಂದ ದೇಶದಲ್ಲಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಂದಿವೆ. ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ ಮಾಡುವುದೊಂದೆ ಶಾಶ್ವತ ಪರಿಹಾರ ಎಂದು ಶಾಸಕ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಉಳಿದ ಎಲ್ಲ ವಿಷಯಗಳನ್ನು ಬದಿಗಿರಿಸಿ, ಅತೀ ಕಡಿಮೆ ಅವಧಿಯಲ್ಲಿ 100 ಕೋಟಿ ಜನರಿಗೆ ಲಸಿಕೆ ಹಾಕಿಸುವ ಅಭಿಯಾನವನ್ನು ಕೈಗೊಂಡು, ಅದಕ್ಕೆ ಎಲ್ಲ ಅಗತ್ಯ ನೆರವು ಒದಗಿಸಿ, ವಿಶೇಷ ಆದ್ಯತೆಯನ್ನು ನೀಡಬೇಕಾದ ತುರ್ತು ಅಗತ್ಯವಿದೆ. ಆಗ ಮಾತ್ರ ಈ ಸಮಸ್ಯೆಗೆ ಸಂಪೂರ್ಣ ಮತ್ತು ಶಾಶ್ವತ ಪರಿಹಾರ ಸಾಧ್ಯ ಎಂದು ತಿಳಿಸಿದ್ದಾರೆ.

ಈಗಾಗಲೇ ಲಸಿಕೆ ಮುಗಿಸಿರುವ ಅಮೆರಿಕಾ, ಯೂರೋಪಿಯನ್ ರಾಷ್ಟ್ರಗಳು, ಇಸ್ರೇಲ್ ಮತ್ತಿತರ ದೇಶಗಳು ಕೋವಿಡ್‌ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130 ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ ಈ ಲಸಿಕೆ ಹಾಕಿಸಬೇಕು ಎಂದು ಹೇಳಿದ್ದಾರೆ.

ADVERTISEMENT

ನಮ್ಮ ದೇಶದಲ್ಲಿಯೇ ಹೆಚ್ಚಿನ ಲಸಿಕೆ ಉತ್ಪಾದನೆ ಮಾಡಬೇಕು. ಅಗತ್ಯವಿರುವಷ್ಟು ಬೇರೆ ರಾಷ್ಟ್ರಗಳಿಂದ ಕೂಡ ಆಮದು ಮಾಡಿಕೊಂಡು, ಲಸಿಕೆ ಹಾಕಿಸಲು ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.