ADVERTISEMENT

ಕನ್ನಡ ಕಟ್ಟಲು ಕಂಕಣಬದ್ಧರಾಗಿ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 5:37 IST
Last Updated 5 ನವೆಂಬರ್ 2025, 5:37 IST
ವಿಜಯಪುರದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಕರವೇಯಿಂದ ಹಮ್ಮಿಕೊಂಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು
ವಿಜಯಪುರದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಕರವೇಯಿಂದ ಹಮ್ಮಿಕೊಂಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು   

ವಿಜಯಪುರ: ‘ಕನ್ನಡ ನಮ್ಮೆಲ್ಲರ ಅಸ್ಮಿತೆಯಾಗಿದ್ದು, ಕನ್ನಡ ಕಟ್ಟುವ ಕಾಯಕದಲ್ಲಿ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು. ಬದುಕಿನ ಭಾಷೆಗೆ ಅನ್ಯಾಯವಾಗದಂತೆ ಸಂರಕ್ಷಿಸಬೇಕು’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ  ಹಮ್ಮಿಕೊಂಡ ರಾಜ್ಯೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಕನ್ನಡ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಇಡೀ ದೇಶದಲ್ಲಿಯೇ ಉತ್ಕೃಷ್ಟ ಭಾಷೆ ಕನ್ನಡವಾಗಿದೆ. ನಾವೆಲ್ಲರೂ ಕನ್ನಡತನ ಉಳಿಸಿ ಬೆಳೆಸಲು ಶ್ರಮವಹಿಸಬೇಕು, ನಿತ್ಯ ನಿರಂತರ ಕನ್ನಡ ತಾಯಿ ಸೇವೆ ಮಾಡಬೇಕು’ ಎಂದರು.

ADVERTISEMENT

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರವೇ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ಕನ್ನಡ ರಸಮಂಜರಿ ಕಾರ್ಯಕ್ರಮ ಜರುಗಿತು.

ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ, ಶಾಸಕ ವಿಠ್ಠಲ ಕಟಕದೊಂಡ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಮೇಯರ್‌ ಎಂ.ಎಸ್. ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್‌, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಸಿ. ಮುಲ್ಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.