ADVERTISEMENT

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: 46 ದಿನ ಪೂರೈಸಿದ ಹೋರಾಟ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 6:58 IST
Last Updated 3 ನವೆಂಬರ್ 2025, 6:58 IST
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ಸೂಚಿಸಿದರು
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ಸೂಚಿಸಿದರು   

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ಸೂಚಿಸಿದರು.

ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ ಮಾತನಾಡಿ,  ಜಿಲ್ಲೆಯ ಜನರ ಆರೋಗ್ಯ ಹಕ್ಕನ್ನು ರಕ್ಷಿಸುವ ಮಹತ್ವದ ಹೋರಾಟವಾಗಿದೆ. ಈ ಹೋರಾಟವು ಕೇವಲ ವೈದ್ಯಕೀಯ ಕಾಲೇಜಿನ ಸ್ಥಾಪನೆಗೆ ಮಾತ್ರವಲ್ಲ, ಉತ್ತರ ಕರ್ನಾಟಕದ ರೈತರ ಹಾಗೂ ಜನರ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ರೈತ ಸಮುದಾಯವು ಆರೋಗ್ಯ ಸೇವೆಯ ಕೊರತೆಯಿಂದ ತುಂಬಾ ಅನ್ಯಾಯಕ್ಕೆ ಒಳಗಾಗಿದೆ. ವಿಜಯಪುರದಂತಹ ಹಿಂದುಳಿದ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯು ಜನರ ಜೀವನಕ್ಕೆ ರಕ್ಷಣೆಯಾಗುತ್ತದೆ. ನಾವು ಈ ಚಳವಳಿಗೆ ಪೂರ್ಣ ಬೆಂಬಲ ನೀಡುತ್ತಿದ್ದು, ಸರ್ಕಾರದ ಯಾವುದೇ ವಿಳಂಬವನ್ನು ವಿರೋಧಿಸುತ್ತೇವೆ ಎಂದರು.

ADVERTISEMENT

ಹಸಿರು ಸೇನೆಯ ಪದಾಧಿಕಾರಿಗಳು ಸಹ, ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯತೆಯನ್ನು ಒತ್ತಿ ಹೇಳಿ, ಹೋರಾಟಕ್ಕೆ ತಮ್ಮ ಸಂಘಟನೆಯ ಎಲ್ಲಾ ಸದಸ್ಯರ ಬೆಂಬಲವನ್ನು ಘೋಷಿಸಿದರು.

ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಸಗರ, ಪದಾಧಿಕಾರಿಗಳಾದ ರಾಮನಗೌಡ ಪಾಟೀಲ್, ಅಭಿಷೇಕ್ ಹೂಗಾರ್, ಸಂಗಪ್ಪ ಟಕ್ಕೆ, ಪ್ರಕಾಶ್ ತೇಲಿ, ಶಂಕ್ರಪ್ಪಗೌಡ ಎಸ್.ಬಿ, ಮಕ್ಬಲ್ ಸಾಬ್ ಕಿಜಿ, ಸುತಪ್ಪ ಗಣಿ, ಮುದಕಣ್ಣ ಹೊರ್ತಿ, ಮಂಜುನಾಥ್ ಖಾರ, ಸಚಿನ್ ಸವನಳ್ಳಿ, ಅದ್ರ್ಯುಸಪ್ಪ ವಾಲಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.