ಸಿದ್ದರಾಮಯ್ಯ , ಮುಖ್ಯಮಂತ್ರಿ
ವಿಜಯಪುರ: ‘ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲು ನಿರ್ಧರಿಸಲಾಗಿದೆ. ಸರ್ಕಾರಿ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ನೀಟ್ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಮಾತ್ರ ವೈದ್ಯಕೀಯ ಸೀಟು ಸಿಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
‘ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಕಾರ್ಯ ನೆರವೇರಲಿದೆ. 2025-26 ನೇ ಸಾಲಿನ ಬಜೆಟ್‌ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.
ಇದಕ್ಕೂ ಮುನ್ನ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರನ್ನು ಭೇಟಿಯಾಗಿ, ‘ಖಾಸಗಿ ಸಹಭಾಗಿತ್ವದ ಬದಲು ಸರ್ಕಾರವೇ ವೈದ್ಯಕೀಯ ಕಾಲೇಜು ನಿರ್ಮಿಸಲು ಆದ್ಯತೆ ನೀಡಬೇಕು’ ಎಂದು ಮನವಿಪತ್ರ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.