ADVERTISEMENT

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮೊಹ್ಸೀನ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 5:59 IST
Last Updated 21 ಡಿಸೆಂಬರ್ 2025, 5:59 IST
ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್‌ ಶನಿವಾರ ಪರಿಶೀಲಿಸಿದರು
ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್‌ ಶನಿವಾರ ಪರಿಶೀಲಿಸಿದರು   

ವಿಜಯಪುರ: ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು, ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಬೇಕು, ವೈದ್ಯರ ಸಲಹೆಯನ್ನು ಆಧರಿಸಿ ಕೊಠಡಿ ಮೊದಲಾದವುಗಳನ್ನು ನಿರ್ಮಿಸಿ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್‌ ಸೂಚಿಸಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡವನ್ನು  ಶನಿವಾರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜನವರಿ 15 ರೊಳಗಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ವಿಜಯಪುರ ಜನತೆಗೆ ಭವಿಷ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲಿದ್ದು, ಚಿಕಿತ್ಸೆಗಾಗಿ ದೂರದ ಮೀರಜ್, ಸಾಂಗ್ಲಿ, ಸೋಲಾಪುರ ಮೊದಲಾದ ದೂರದ  ಊರುಗಳಿಗೆ ಹೋಗುವುದು ತಪ್ಪುತ್ತದೆ, ಸುಲಭವಾಗಿ ಇಲ್ಲಿಯೇ ಚಿಕಿತ್ಸೆ ದೊರಕಲಿದೆ ಎಂದರು.

ADVERTISEMENT

ಸುಸಜ್ಜಿತ ವೈದ್ಯಕೀಯ ಉಪಕರಣ, ತಜ್ಞ ವೈದ್ಯರ ಸೇವೆ ಇಲ್ಲಿಗೆ ಲಭ್ಯವಾಗಲಿದೆ, ಈ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಡಿಯೋಲಾಜಿ, ಪ್ಲಾಸ್ಟಿಕ್ ಸರ್ಜರಿ, ನ್ಯೂರೋ ಸರ್ಜರಿ ಸೇರಿದಂತೆ ಅನೇಕ ಮಹತ್ವದ  ಚಿಕಿತ್ಸೆಗಳನ್ನು  ಒದಗಿಸಲಾಗುತ್ತಿದೆ ಎಂದರು.

ಜನರಿಗೆ ಅನುಕೂಲಕರವಾದ ಈ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ, ಟ್ರಾಮಾ ಕೇಂದ್ರದ ಸೇವೆಯನ್ನು ಸಹ ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ. ಆನಂದ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಡಾ.ಜಾವೀದ ಜಮಾದಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಇಲಿಯಾಸ್‌ ಅಹ್ಮದ್ ಸಿದ್ದಿಕಿ, ಬಾಬಾಸಾಹೇಬ ವಿಜಯದಾರ, ಜಿಲ್ಲಾ ಆಸ್ಪತ್ರೆ ಸಲಹಾ ಸಮಿತಿ ಸದಸ್ಯರು, ವೈದ್ಯರು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.