ಕೊಲ್ಹಾರ: ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ನೇತೃತ್ವದಲ್ಲಿ ಅಗಸ್ಟ್ 1 ರಂದು ಹಮ್ಮಿಕೊಂಡಿರುವ ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬುಧವಾರ ತಾಲ್ಲೂಕು ಪಂಚಾಯತ ಕಾರ್ಯದಲ್ಲಿ ತಹಶೀಲ್ದಾರ್ ಎಸ್ ಹೆಚ್ ಅರಕೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಅಧ್ಯಕ್ಷ ರವಿ ಗೋಸಂಗಿ ಮಾತನಾಡಿ, ಸಭೆ ಸಮಾರಂಭಗಳು ಹಾಗೂ ಆಚರಣೆಗಳು ಕೇವಲ ಸರ್ಕಾರದ ಆದೇಶದ ಮೇರೆಗೆ ಕಾಟಾಚಾರಕ್ಕೆ ಆಗಬಾರದು. ಯೋಜನೆಗಳು ಕಾರ್ಯರೂಪಕ್ಕೆ ಬರಬೇಕು ಮತ್ತು ಈ ಪೂರ್ವಭಾವಿ ಸಭೆಗೆ ತಾಲ್ಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತ ಇರುವುದಿಲ್ಲ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.
ತಹಶೀಲ್ದಾರ ಎಸ್ ಎಚ್ ಅರಕೇರಿ ಮಾತನಾಡಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನದಂದು ವ್ಯಸನ ಮುಕ್ತ ದಿನಾಚರಣೆ ಹಮ್ಮಿಕೊಂಡಿದ್ದು ಉತ್ತಮ ಮಾರ್ಗ ತೋರಿಸುವ ಕಾರ್ಯಕ್ರಮ ಇದಾಗಿದ್ದು, ನಮ್ಮ ತಾಲ್ಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಗೂ ಪಟ್ಟಣದ ನಾಗರೀಕರು ಕೂಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಪತ್ರಕರ್ತ ಈರಯ್ಯ ಗಣಕುಮಾರ ಮಾತನಾಡಿದರು. ಪೂರ್ವ ಭಾವಿ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ ಹಟ್ಟಿ, ವೈದ್ಯಾಧಿಕಾರಿ ಲಕ್ಷ್ಮೀ ತಲ್ಲೂರು, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ರಾಮನಗೌಡ ಪಾಟೀಲ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.