ವಿಜಯಪುರ:ಕೋವಿಡ್ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ ನಡೆಸಿದರು.
ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ ಕೋವಿಡ್ ಪರಿಹಾರ ಪ್ಯಾಕೇಜ್ ಅನ್ನು ಬಿಸಿಯೂಟ ನೌಕರರಿಗೆ ನೀಡಬೇಕು, ಜೀವನ ಯೋಗ್ಯ ವೇತನ ನೀಡಬೇಕು,ವಾರ್ಷಿಕ 12 ತಿಂಗಳ ವೇತನ ಪಾವತಿಸಬೇಕು,ಶಾಲೆಯ ಪ್ರಾರಂಭಕ್ಕೂ ಮುನ್ನ ನೌಕರರಿಗೆ ಉಚಿತ ಲಸಿಕೆ ನೀಡಬೇಕು ಹಾಗೂಸೇವಾ ಭದ್ರತೆ, ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ, ಸಂಘಟನಾಕಾರರಾದ ಶಶಿಕಲಾ ಮ್ಯಾಗೆರಿ, ಗಂಗೂಬಾಯಿ ಉಳ್ಳಾಗಡ್ಡಿ, ಬಸಮ್ಮ ಆಲಮಟ್ಟಿ, ಜಿಲ್ಲೆಯ ವಿವಿಧ ಕಾರ್ಮಿಕರು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.