ADVERTISEMENT

ವಿಜಯಪುರದ ಕನ್ನೂರಿನಲ್ಲಿ ಲಘು ಭೂಕಂಪ: ಭಯಭೀತರಾಗಿ ಮನೆಯಿಂದ ಹೊರಗೆ ಓಡಿದ ಜನ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 13:49 IST
Last Updated 10 ಫೆಬ್ರುವರಿ 2026, 13:49 IST
<div class="paragraphs"><p>ಭೂಕಂಪ (ಸಾಂದರ್ಭಿಕ ಚಿತ್ರ)</p></div>

ಭೂಕಂಪ (ಸಾಂದರ್ಭಿಕ ಚಿತ್ರ)

   

– ಐಸ್ಟಾಕ್ ಚಿತ್ರ

ವಿಜಯಪುರ: ತಾಲ್ಲೂಕಿನ ಕನ್ನೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ 11.43ಕ್ಕೆ ಲಘು ಭೂಕಂಪನವಾಗಿದೆ. ರಿಕ್ಟರ್‌ ಮಾಪಕದಲ್ಲಿ 2.6 ಭೂಕಂಪನದ ತೀವ್ರತೆ ದಾಖಲಾಗಿದೆ.

ADVERTISEMENT

ಭೂಮಿ ಒಳಗಿನಿಂದ ಸ್ಪೋಟದ ಸದ್ದು ಕೇಳಿಬಂದಿಂದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

‘ಭೂಕಂಪನ ತೀವ್ರತೆ ಕಡಿಮೆಯಿದ್ದು, ಈ ರೀತಿಯ ಭೂಕಂಪವು ಸ್ಥಳೀಯರಿಗೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ.ಭೂಕಂಪನ ಕೇಂದ್ರಬಿಂದುವು ಭೂಕಂಪನ ವಲಯ ಮೂರರಲ್ಲಿ ಬರುವುದರಿಂದ ಜನರು ಭಯಭೀತರಾಗಬೇಕಾಗಿಲ್ಲ’ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.