ADVERTISEMENT

ಸಚಿವ ಎಂ.ಬಿ. ಪಾಟೀಲರ ವಿಜಯಪುರ ಪ್ರವಾಸ ಜೂನ್‌ 1ಕ್ಕೆ

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:53 IST
Last Updated 30 ಮೇ 2025, 15:53 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜೂನ್‌ 1ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ.ಎಚ್.ಬಿ ಕಾಲೊನಿಯಲ್ಲಿ 5ನೇ ಹಣಕಾಸು ಯೋಜನೆಯಡಿ ₹90 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ. 11 ಗಂಟೆಗೆ ವಿಜಯಪುರ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸುವರು. 11.30ಕ್ಕೆ ‘ಹಸಿರು ವಿಜಯಪುರ’ ಅಂಗವಾಗಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಜಿಲ್ಲಾಮಟ್ಟದ ಪ್ರಮುಖ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. 12.30ಕ್ಕೆ ಕನಕದಾಸ ಬಡಾವಣೆ ಒಳಾಂಗಣ ಕ್ರೀಡಾಂಗಣದಲ್ಲಿ ಬಾಸ್ಕೆಟ್ ಬಾಲ್ ಅಂಕಣ ಮತ್ತು ವ್ಯಾಯಾಮ ಶಾಲೆ ಉದ್ಘಾಟಿಸಲಿದ್ದಾರೆ. ಸಂಜೆ 4ರಿಂದ 6ರವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.