ಇಂಗಳೇಶ್ವರ ಗ್ರಾಮಸ್ಥರು ಸಚಿವ ಶಿವಾನಂದ ಪಾಟೀಲರನ್ನು ವಿಜಯಪುರ ನಗರದ ಅವರ ನಿವಾಸದಲ್ಲಿ ಭೇಟಿಮಾಡಿ ಸನ್ಮಾನಿಸಿದರು
ಬಸವನಬಾಗೇವಾಡಿ: ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಆಂತರಿಕ ರಸ್ತೆಗಳನ್ನು ಸಿ.ಸಿ. ರಸ್ತೆಯಾಗಿ ಅಭಿವೃದ್ಧಿಪಡಿಸಲು ಹಾಗೂ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ₹ 1.25 ಕೋಟಿ ಮಂಜೂರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಎಸ್‌ಡಿಎಂಸಿ ಅಧ್ಯಕ್ಷರ ನೇತೃತ್ವದಲ್ಲಿ ಸಚಿವ ಶಿವಾನಂದ ಪಾಟೀಲರನ್ನು ವಿಜಯಪುರ ನಗರದ ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಚಿವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.
ಊರಿನ ರಸ್ತೆಗಳು ಸಿ.ಸಿ. ರಸ್ತೆಗಳಾಗಿ ಉನ್ನತೀಕರಣಗೊಳ್ಳಲು ಹಾಗೂ ಶಾಲೆಗಳಿಗೆ ಕಟ್ಟಡ ನಿರ್ಮಾಣಕ್ಕೆ ಸಚಿವರು ವಿಶೇಷ ಕಾಳಜಿ ತೋರಿದ್ದರಿಂದ ಇಂಗಳೇಶ್ವರ ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಬನ್ನೆಪ್ಪ ವಿಠ್ಠಪ್ಪ ಡೋಣೂರು, ಎಸ್‌ಡಿಎಂಸಿ ಅಧ್ಯಕ್ಷ ರೇವಣಸಿದ್ಧಪ್ಪ ಅವಟಿ, ಶ್ರೀಶೈಲ ಚಾಂದಕವಠೆ, ಮುತ್ತಪ್ಪ ಮಾದರ, ಸಹ ಶಿಕ್ಷಕ ಬಿ.ಎಸ್.ಸಂಕಗೊಂಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.