ADVERTISEMENT

ಕೊಲ್ಹಾರ | ₹ 7 ಕೋಟಿ ವೆಚ್ಚದಲ್ಲಿ ಎಪಿಎಂಸಿ ಅಭಿವೃದ್ಧಿ: ಸಚಿವ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 2:28 IST
Last Updated 6 ಜನವರಿ 2026, 2:28 IST
<div class="paragraphs"><p> ತಾಲ್ಲೂಕು ಕೇಂದ್ರವಾಗಿರುವ ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆಗೆ ಮೂಲಭೂತ ಸೌಲಭ್ಯ‌ ಕಲ್ಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಸ್ಥಳ ಪರಿಶೀಲನೆ ನಡೆಸಿದರು.</p></div>

ತಾಲ್ಲೂಕು ಕೇಂದ್ರವಾಗಿರುವ ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆಗೆ ಮೂಲಭೂತ ಸೌಲಭ್ಯ‌ ಕಲ್ಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಸ್ಥಳ ಪರಿಶೀಲನೆ ನಡೆಸಿದರು.

   

ಕೊಲ್ಹಾರ: ತಾಲ್ಲೂಕು ಕೇಂದ್ರವಾಗಿರುವ ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆಗೆ ಮೂಲಭೂತ ಸೌಲಭ್ಯ‌ ಕಲ್ಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವನಾಂದ ಪಾಟೀಲ ಸ್ಥಳ ಪರಿಶೀಲನೆ ನಡೆಸಿದರು.

ಸೋಮವಾರ ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆ ಸ್ಥಾಪನೆ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ‌. ವಿಶೇಷವಾಗಿ ಮಾರುಕಟ್ಟೆ ಪ್ರಾಂಗಣದಲ್ಲಿ ಜಾನುವಾರುಗಳ ಸಂತೆ ನಡೆಸಲು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು‌.

ADVERTISEMENT

ಕೃಷಿ ಮಾರುಕಟ್ಟೆ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಒದಗಿಸುವುದರಿಂದ ಕೊಲ್ಹಾರ ಪಟ್ಟಣ ಅಭಿವೃದ್ಧಿ ಆಗಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಬಲವರ್ಧನೆಯಿಂದ ಪಟ್ಟಣ ಪಂಚಾಯತಿಗೂ ಆದಾಯ ಹೆಚ್ಚಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಸ್ಥಳೀಯವಾಗಿ ಕೃಷಿ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದಲ್ಲಿ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 4 ಎಕರೆ ಜಮೀನು ಮಂಜೂರಾಗಿದೆ. ಸದರಿ ಕೃಷಿ ಮಾರುಕಟ್ಟೆಗೆ ಕಾಯಕಲ್ಪ ನೀಡಲು ₹ 7 ಕೋಟಿ  ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ರಸ್ತೆ ನಿರ್ಮಾಣ, ಕಾಂಪೌಂಡ್ ಗೋಡೆ, ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದರು.

ಈ ಕುರಿತು ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಅಲ್ಲಾಭಕ್ಷ ಸೇರಿದಂತೆ ಎಇಇ ಎಲ್.ಬಿ.ಲಮಾಣಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕೊಲ್ಹಾರ ಕೃಷಿ ಮಾರುಕಟ್ಟೆ ಸಮಿತಿಗೆ ಸ್ಥಳ ಹಸ್ತಾಂತರವಾಗಿದೆ. ಪ್ರಾಂಗಣ ಅಭಿವೃದ್ಧಿ ಯೋಜನೆಗಳಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಕಾರ್ಯಾದೇಶ ನೀಡಲಾಗಿದೆ‌ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಇದೇ ವೇಳೆ ಸ್ಥಳೀಯ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ತೂಕದ ಯಂತ್ರ ಸ್ಥಾಪನೆಗೆ  ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಬ್ಬು ತೂಕದ ಯಂತ್ರ ಸ್ಥಾಪನೆ ಸ್ಥಳ ರಾಷ್ಟ್ರೀಯ ಹೆದ್ದಾರಿ ಪಕ್ಷದಲ್ಲಿ ಇರುವ ಕಾರಣ ವಾಹನ ಸಂಚಾರಕ್ಕೆ ಸಮಸ್ಯೆ ಆಗದಂತೆ ಏಕಮುಖ ಸಂಚಾರ ವ್ಯವಸ್ಥೆ ರೂಪಿಸುವಂತೆ ಸ್ಥಳದಲ್ಲಿದ್ದ ಪಿಎಸ್ಐ ಅಶೋಕ ನಾಯಕ ಅವರಿಗೆ ಸೂಚಿಸಿದರು.

ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ ಸಿ.ಎಸ್.ಗಿಡ್ಡಪ್ಪಗೋಳ, ಸದಸ್ಯರಾದ ವಿಜಯಕುಮಾರ ಗಿಡ್ಡಪ್ಪಗೋಳ, ತೌಸಿಫ್ ಗಿರಗಾಂವಿ, ಶ್ರೀಶೈಲ ಮುಳವಾಡ (ಮಮದಾಪೂರ), ಕಂಕರಪೀರ, ದಸ್ತಗೀರ ಕಲಾದಗಿ, ಹನಿಪ್ ಮಕಾನದಾರ, ಎಂ.ಆರ್. ಕಲಾದಗಿ, ಮಹೇಶ್ ಗಿಡ್ಡಪ್ಪಗೊಳ, ಪ.ಪಂ. ಮುಖ್ಯಾಧಿಕಾರಿ ವಿರೇಶ ಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.