
ಪ್ರಜಾವಾಣಿ ವಾರ್ತೆ
ವಿಜಯಪುರ: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ಭಾನುವಾರ ಬೆಳಗಿನ ಜಾವ ನಿಧನರಾದರು.
ಅವರಿಗೆ ಪುತ್ರರಾದ ಸಚಿವ ಶಿವಾನಂದ ಪಾಟೀಲ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಶಿವಶರಣಗೌಡ ಪಾಟೀಲ ಹಾಗೂ ಪುತ್ರಿ ಮಹಾದೇವಿ ಪಾಟೀಲ ಇದ್ದಾರೆ.
ಅಂತ್ಯಕ್ರಿಯೆ ಭಾನುವಾರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನಡೆಯಿತು. ಮಠಾಧೀಶರು, ರಾಜಕೀಯ ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.