ADVERTISEMENT

ಮಿಷನ್ ಇಂದ್ರಧನುಷ್ ಲಸಿಕಾ ಸಮೀಕ್ಷೆ: ವಿಜಯಪುರ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 14:08 IST
Last Updated 19 ಫೆಬ್ರುವರಿ 2021, 14:08 IST
ಪಿ.ಸುನೀಲ್‌ ಕುಮಾರ್‌
ಪಿ.ಸುನೀಲ್‌ ಕುಮಾರ್‌   

ವಿಜಯಪುರ: ಜಿಲ್ಲೆಯಲ್ಲಿ ಈಗಾಗಲೇ ಪ್ರಾಥಮಿಕ ಹಂತದಲ್ಲಿ ಗ್ರಾಮವಾರು ಇಂದ್ರಧನುಷ್ ಲಸಿಕಾ ಸಮೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಕ್ರಮ ಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿದಅವರು, ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಿಸಿದ ಇಲಾಖೆ ಸಿಬ್ಬಂದಿ ಮುಂದಾಗಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 2 ವರ್ಷದ ಒಳಗಿನ ಮಕ್ಕಳು6613 ಹಾಗೂ 1530 ಗರ್ಭಿಣಿಯರ ಮುಂಗಡ ಪಟ್ಟಿಯನ್ನು ತಯಾರಿಸಲಾಗಿದೆ. 609 ಲಸಿಕಾ ಪತ್ರಗಳನ್ನು ಕೈಗೊಂಡು ಲಸಿಕೆ ಹಾಕಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ್ ಯರಗಲ್, ಮಹಾನಗರಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ,ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಶ್ ನಾಗರಬೆಟ್ಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.