ADVERTISEMENT

ಅಭಿವೃದ್ಧಿ ಕೆಲಸ ಮಾಡೋಣ: ಮನಗೂಳಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 13:01 IST
Last Updated 4 ಅಕ್ಟೋಬರ್ 2024, 13:01 IST
ತಾಂಬಾ ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಜೆ ನೆರವೇರಿಸಿದ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗಾರ ಸನ್ಮಾನಿಸಿದರು
ತಾಂಬಾ ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಜೆ ನೆರವೇರಿಸಿದ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗಾರ ಸನ್ಮಾನಿಸಿದರು   

ತಾಂಬಾ: ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಮತ್ತು 2022-23ನೇ ಸಾಲಿನ ಜಲಜೀವನ ಮಿಷನ್‌ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ₹25 ಲಕ್ಷ ಮತ್ತು ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ₹186.43 ಲಕ್ಷ ಹಣ ಬಿಡುಗಡೆ ಮಾಡಿದ್ದೇನೆ ಮತ್ತು ಈ ಗ್ರಾಮದಲ್ಲಿ ಹಲವಾರು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡುತ್ತೇನೆ. ಈ ಗ್ರಾಮದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಿಯಿಂದ ನಾವೆಲ್ಲ ಒಂದಾಗಿ ಕೆಲಸ ಮಾಡಬೇಕು ಎಂದರು.

ADVERTISEMENT

ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ,ಕಾಂತನಗೌಡ ಪಾಟೀಲ, ಶಂಕರ ಹಿರೋಳಿ, ಸಿದ್ದಾರಾಮ ಅಗಟಗಿ, ಕಾಸು ಬಾಸಗಿ, ಸಿದ್ದರಾಮ ಪವಾರ, ಅಶೋಕ ಬಾಸಗಿ, ರಮೇಶ ಬಾಸಗಿ, ಷಣ್ಮಖ ದುರ್ಗದ, ಗೋಪಾಲ ಜಾಧವ, ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.