ಸಿಂದಗಿ: ‘ಮತಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಶಾಸಕ ಅಶೋಕ ಮನಗೂಳಿ ಮೂಲೆ ಗುಂಪು ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಎಂ.ಪಿ.ರಾಠೋಡ (ಡಂಬಳ) ಆರೋಪಿಸಿದ್ದಾರೆ.
‘ತಾಲ್ಲೂಕಿನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಗೌರವವಿಲ್ಲದಾಗಿದೆ. ಸರ್ಕಾರದ ನಾಮನಿರ್ದೇಶನ ಮಾಡುವಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ತಮ್ಮ ಹಿಂಬಾಲಿಕರನ್ನೆ ಸರ್ಕಾರದ ವಿವಿಧ ಹುದ್ದೆಗಳಿಗೆ ನಾಮನಿರ್ದೇಶನ ಮಾಡಿದ್ದಾರೆ. ಅದರಲ್ಲೂ ಲಂಬಾಣಿ ಸಮುದಾಯದ ಬಗ್ಗೆ ಅವರಲ್ಲಿ ಕಾಳಜಿ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಮನಗೂಳಿಯವರು ಶಾಸಕರಾಗಲು ಜೆಡಿಎಸ್‌ನಿಂದ ಕಾಂಗ್ರೆಸ್ಸಿಗೆ ವಲಸೆ ಬಂದವರಷ್ಟೆ ಕಾರಣರಲ್ಲ. ಹಿಂದುಳಿದವರು, ಮುಸ್ಲಿಂರು, ಪರಿಶಿಷ್ಟ ಜಾತಿಯವರು, ಲಂಬಾಣಿ ಸಮುದಾಯ ಒಳಗೊಂಡಂತೆ ಎಲ್ಲ ಜಾತಿ, ಜನಾಂಗದ ಜನತೆ ಕಾರಣರಾಗಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ರಾಠೋಡ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.