ADVERTISEMENT

ಸಿಡಿ ಪ್ರಕರಣ ಸಿಬಿಐಗೆ ನೀಡಲಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 15:40 IST
Last Updated 12 ಮಾರ್ಚ್ 2021, 15:40 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ಸಿಡಿ ಪ್ರಕರಣ ಎಸ್‌ಐಟಿಗೆ ನೀಡಿದ್ದು ಸಮಂಜಸವಲ್ಲ. ಇದನ್ನು ಸಿಬಿಐಗೆ ನೀಡಬೇಕಿತ್ತು. ಸಿಡಿ ಪ್ರಕರಣ ಎಸ್‌ಐಟಿ ಮೇಲೆ ಪ್ರಭಾವ ಬೀರಬಹುದು, ಆದರೆ, ಸಿಬಿಐ ಮೇಲೆ ಪ್ರಭಾವ ಬೀರಲು ಆಗಲ್ಲ. ಹೀಗಾಗಿ ಸಿಡಿ ಕೇಸ್‌ಗಳ ಸಮಗ್ರ ತನಿಖೆಯನ್ನು ಸಿಬಿಐಗೆ ನೀಡಬೇಕುಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಲವರು ಸಚಿವರಾಗಲು ಸಿನಿಮಾ ತಾರೆಯರನ್ನು ದೆಹಲಿಗೆ ಕರೆದೊಯ್ದಿದ್ದರು. ಅಂತವರೆಲ್ಲ ಈಗ ಸಚಿವರಾಗಿದ್ದಾರೆ ಎಂದು ಆರೋಪಿಸಿದರು.

ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡೋದೇ ಕಾಂಗ್ರೆಸ್ ಸಂಸ್ಕೃತಿಯಾಗಿದ್ದು, ಈಗಲೂ ಅದು ಮುಂದುವರೆದಿದೆ ಎಂದು ಆರೋಪಿಸಿದರು.

ADVERTISEMENT

ಗಿಮಿಕ್ ಆಗದಿರಲಿ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ ಹಾಗೂ ವಿವಿಧ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿರುವುದು ಕೇವಲ ರಾಜಕೀಯ ಗಿಮಿಕ್ ಆಗಬಾರದು ಎಂದು ಹೇಳಿದರು.

ಸದ್ಯ ಸರ್ಕಾರ ನೇಮಕ ಮಾಡುವ ಸಮಿತಿಗೆ ಕಾಲಮಿತಿ ನಿಗದಿ ಮಾಡಬೇಕು. ಟಿಎ, ಡಿಎ ಪಡೆಯಲು ಮಾತ್ರ ಸಮಿತಿ ಸೀಮಿತವಾಗಬಾರದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.