ADVERTISEMENT

ಕಾಂಗ್ರೆಸ್, ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 15:54 IST
Last Updated 3 ಜುಲೈ 2019, 15:54 IST

ವಿಜಯಪುರ: ‘ಕಾಂಗ್ರೆಸ್ ನಾಯಕರಲ್ಲಿ ಕೆಲವರು ಸಿ.ಎಂ ಆಗುವ ಕನಸು ಕಾಣುತ್ತಿದ್ದಾರೆ. ಅವರು ಕನಸು ಕಾಣುವುದು ಬೇಡ. ಕರ್ನಾಟಕದಲ್ಲಿ ಇನ್ನೆಂದೂ ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಧ್ಯಂತರ ಅಥವಾ ನಾಲ್ಕು ವರ್ಷ ಬಿಟ್ಟು ಚುನಾವಣೆ ನಡೆದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ’ ಎಂದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯಿಸಿದ ಯತ್ನಾಳ, ‘ಸಿ.ಎಂ ಆದಿಚುಂಚನಗಿರಿ ಸ್ವಾಮೀಜಿ ಕನಸು ನನಸು ಮಾಡಲು, ಕಾಲಭೈರವೇಶ್ವರನ ಭೂಮಿ ಪೂಜೆಗೆ ಹೋಗಿದ್ದಾರೆ. ಕಾಲಭೈರವೇಶ್ವರ ಅವರಿಗೂ, ನಮಗೂ ಒಳ್ಳೆಯದನ್ನು ಮಾಡಲಿ. ಸಿ.ಎಂ ದ್ವೇಷದ ರಾಜಕಾರಣ ಬಿಟ್ಟು, ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಸಲಹೆ ನೀಡಿದರು.

ADVERTISEMENT

‘ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನಿಸುತ್ತಿಲ್ಲ’ ಎಂಬ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆಗೆ, ‘ಜಿ.ಟಿ.ದೇವೇಗೌಡ ಒಳ್ಳೆಯ ರಾಜಕಾರಣಿ. ಮೋದಿ ಬಗ್ಗೆ ಅವರಿಗೆ ಗೌರವ ಇದೆ. ಹಾಗಾಗಿ ನಾನು ಅವರಿಗೆ ಕೃತಜ್ಞತೆ ಹೇಳುತ್ತೇನೆ. ಇಂತಹ ರಾಜಕಾರಣಿಗಳು ಕರ್ನಾಟಕಕ್ಕೆ ಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.