ಮುದ್ದೇಬಿಹಾಳ: ಕರ್ನಾಟಕ ಉಪ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘20 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ, ಅದರಲ್ಲೂ ಗೆಲ್ಲುವುದು ಅಸಾಧ್ಯ ಎಂದೇ ಹೇಳಲಾಗಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ ಗೆಲುವು ಅಷ್ಟೊಂದು ಸುಲಭ ಅಲ್ಲ ಎಂಬುದೇ ರಾಜಕೀಯ ಪಂಡಿತರ ಲೆಕ್ಕಾಚಾರವಾಗಿತ್ತು. ಉಳಿದ ನಾಯಕರೊಂದಿಗೆ ಸಂಚರಿಸಿ ಜನರಿಗೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುವಂತೆ ಪ್ರಚಾರ ಮಾಡಿದ್ದೆವು. ನಮಗೆ ಪಕ್ಷ ವಹಿಸಿದ್ದ ಶಿಗ್ಗಾವಿ-ಸವಣೂರು ವಿಧಾನಸಭೆಯ ಹುರುಳಿಕೊಪ್ಪ ಜಿಲ್ಲಾ ಪಂಚಾಯಿತಿ ಉಸ್ತುವಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.