ADVERTISEMENT

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಡಿಸಿಎಂ ಕಾರಜೋಳ ಅಡಚಣೆ; ದೇವಾನಂದ ಚವ್ಹಾಣ ಆರೋಪ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 7:15 IST
Last Updated 28 ಅಕ್ಟೋಬರ್ 2020, 7:15 IST
ಶಾಸಕ ದೇವಾನಂದ ಚವ್ಹಾಣ
ಶಾಸಕ ದೇವಾನಂದ ಚವ್ಹಾಣ   

ವಿಜಯಪುರ: ನಾಗಠಾಣ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಡಚಣೆ ಮಾಡುತ್ತಿದ್ದಾರೆ. ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ, ಕುಡಿಯುವ ನೀರಿನ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ ಎಂದು ದೂರಿದರು. ಭೀಮಾ, ಡೋಣಿ ನದಿಗಳ ಪ್ರವಾಹದಿಂದ ತಾಲ್ಲೂಕಿನ 19 ಗ್ರಾಮಗಳ ಜನರು ಸಂತ್ರಸ್ತರಾಗಿದ್ದಾರೆ. ಬೆಳೆಹಾನಿಯಿಂದ ಕೃಷಿಕರು ತತ್ತರಿಸಿ ಹೋಗಿದ್ದರೂ ಅತಿವೃಷ್ಟಿ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡದಂತೆ ಡಿಸಿಎಂ ತಡೆಹಿಡಿದಿದ್ದಾರೆ ಎಂದು ಆರೋಪಿಸಿದರು.

ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದರೂ ದುರಸ್ತಿಗೆ ನಯಾ ಪೈಸೆ ಅನುದಾನ ನೀಡಿಲ್ಲ ಎಂದು ದೂರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಗೋಪಾಲ ಕಾರಜೋಳ ಅವರು ನನ್ನ ವಿರುದ್ಧ ಸೋತಿರುವುದರಿಂದ ನನ್ನ ಮತ್ತು ಕ್ಷೇತ್ರದ ಜನತೆ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ADVERTISEMENT

ಪ್ರವಾಹಪೀಡಿತ ನಾಗಠಾಣ ಕ್ಷೇತ್ರವನ್ನು ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಬೇಕು, ಯಾವುದೇ ತಾರತಮ್ಯ ಮಾಡದೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.