ADVERTISEMENT

ಶಾಸಕ ಎಂ.ಸಿ.ಮನಗೂಳಿ ನಿಧನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 2:56 IST
Last Updated 28 ಜನವರಿ 2021, 2:56 IST
ಶಾಸಕ ಎಂ.ಸಿ.ಮನಗೂಳಿ
ಶಾಸಕ ಎಂ.ಸಿ.ಮನಗೂಳಿ    

ವಿಜಯಪುರ:ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದಾಗಿ‌ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.

ಎರಡು ಬಾರಿ ಶಾಸಕರಾಗಿದ್ದ ಅವರು, ಎರಡು ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ.

ADVERTISEMENT

ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ.

ಮನಗೂಳಿ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರು ಬೆಂಗಳೂರಿನಿಂದ ಸಿಂದಗಿಯತ್ತ ರಸ್ತೆ ಮಾರ್ಗವಾಗಿ ತೆಗೆದುಕೊಂಡು ಬರುತ್ತಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಿಂದಗಿ ತಲುಪುವ ನಿರೀಕ್ಷೆ ಇದೆ. ಅಂತ್ಯ ಸಂಸ್ಕಾರ ಸಮಯ ಹಾಗೂ ಸ್ಥಳದ ಬಗ್ಗೆ ತಿಳಿದುಬಂದಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.