ADVERTISEMENT

ನೋವು ಆಲಿಸಿದ ಶಾಸಕ ಪಾಟೀಲ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 15:14 IST
Last Updated 14 ಆಗಸ್ಟ್ 2019, 15:14 IST
ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ನೆರೆ ಹಾವಳಿ ಪೀಡಿತ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿದ ಶಾಸಕ ಎಂ.ಬಿ.ಪಾಟೀಲ ಸಂತ್ರಸ್ತರ ಅಳಲು ಆಲಿಸಿದರು
ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ನೆರೆ ಹಾವಳಿ ಪೀಡಿತ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿದ ಶಾಸಕ ಎಂ.ಬಿ.ಪಾಟೀಲ ಸಂತ್ರಸ್ತರ ಅಳಲು ಆಲಿಸಿದರು   

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರದ ನೆರೆ ಹಾವಳಿ ಪೀಡಿತ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿದ ಶಾಸಕ ಎಂ.ಬಿ.ಪಾಟೀಲ ಅವರು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

‘2004ರಲ್ಲಿ ಮುಳುಗಡೆ ಆದ ಈ ಗ್ರಾಮಗಳಿಗೆ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ, ಜನರು ಅಲ್ಲಿ ವಾಸಿಸದೇ, ಮುಳುಗಡೆ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ಮೊದಲೇ ಸ್ಥಳಾಂತರಗೊಂಡಿದ್ದರೆ ನಷ್ಟವಾಗುತ್ತಿರಲಿಲ್ಲ’ ಎಂದು ಉಪ ವಿಭಾಗಾಧಿಕಾರಿ ಸೋಮನಿಂಗ ಗೆಣ್ಣೂರ ಹೇಳಿದರು.

‘ಶಿರಬೂರ, ಕಣಬೂರ, ಚಿಕ್ಕಗಲಗಲಿ, ಜಂಬಗಿ (ಎಚ್), ಹೊಸೂರು ಮತ್ತು ಸುತಗುಂಡಿ ಗ್ರಾಮಗಳಲ್ಲಿ ಸಂಚರಿಸಿ, ಸಂತ್ರಸ್ತರ ನೋವು ಆಲಿಸಿ, ಆಹಾರ, ವಸತಿ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಕೊರತೆಯಾಗದಂತೆ ಆಯಾ ತಾಲ್ಲೂಕಿನ ತಹಶೀಲ್ದಾರರು ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರ ತಂಡವು ಬಬಲಾದ ಗ್ರಾಮದ ಜನರಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಇಲ್ಲಿಗೆ ಭೇಟಿ ನೀಡಿದ ಎಂ.ಬಿ.ಪಾಟೀಲ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಬಬಲೇಶ್ವರ ತಹಶೀಲ್ದಾರ್ ಎಂ.ಎಸ್.ಅರಕೇರಿ, ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ವಿ.ಎಸ್.ಪಾಟೀಲ, ರೈತ ಮುಖಂಡರಾದ ಎಚ್.ಎಸ್.ಕೋರಡ್ಡಿ, ಡಾ.ಕೆ.ಎಚ್.ಮುಂಬಾರೆಡ್ಡಿ, ವೆಂಕಣ್ಣ ಬಿದರಿ, ಅಪ್ಪುಗೌಡ ಪಾಟೀಲ, ಪ್ರಶಾಂತ ದೇಸಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.