
ಪ್ರಜಾವಾಣಿ ವಾರ್ತೆವಿಜಯಪುರ: ವಿಜಯಪುರ–ಬಾಗಲಕೋಟೆವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನ. 16 ರಿಂದ ನ. 23 ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ನ. 21ರಂದು ಭಾನುವಾರ ರಜೆ ಹಾಗೂ ನ.22 ರಂದು ಸೋಮವಾರ ಕನಕದಾಸ ಜಯಂತಿ ಹೊರತುಪಡಿಸಿ, ಉಳಿದ ದಿನಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.