ADVERTISEMENT

ಮೋದಿ ಜನ್ಮದಿನ: ವೈವಿಧ್ಯಮಯ ಸೇವಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 12:45 IST
Last Updated 16 ಸೆಪ್ಟೆಂಬರ್ 2022, 12:45 IST
ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ವಿಜಯಪುರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿದರು
ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ವಿಜಯಪುರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿದರು   

ವಿಜಯಪುರ: ಸೆ. 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದಿಂದ ಅ. 2 ಗಾಂಧಿ ಜಯಂತಿ ವರೆಗೆ ಬಬಲೇಶ್ವರ ಮಂಡಲದಲ್ಲಿ ಆರೋಗ್ಯ ಶಿಬಿರ, ಗಿಡನೆಡುವ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಕೋವಿಡ್‌ ಲಸಿಕಾ ಅಭಿಯಾನ, ಮೋದಿ ಜೀವನ ಚರಿತ್ರೆ ಕುರಿತಾದ ಪುಸ್ತಕ ಪರಿಚಯ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದರು.

ಮೋದಿ ಜನ್ಮದಿನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸೆ.17 ರಂದು ತಿಕೋಟಾ ತಾಲ್ಲೂಕಿನ ಕನಮಡಿ ಬಸವೇಶ್ವರ ದೇವಸ್ಥಾನದಲ್ಲಿ ಮತ್ತು ಸೆ.21ರಂದು ಜಾಲಗೇರಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ,ಹಮ್ಮಿಕೊಳ್ಳಲಾಗಿದೆ ಎಂದರು.

ಮಂಡಲ ಅಧ್ಯಕ್ಷ ವಿಠ್ಠಲ ಕಿರಸೂರ, ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲ ಉಸ್ತುವಾರಿ ಬಸವರಾಜ ಬೈಚಬಾಳ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುರಲಿಂಗಪ್ಪ ಅಂಗಡಿ, ಸಾಬು ಮಾಶ್ಯಾಳ, ಮುಖಂಡರಾದ ಶಿವನಗೌಡ ಪಾಟೀಲ, ಶಂಕರಗೌಡ ಬಿರಾದಾರ, ಬಸವರಾಜ ಕುರವಿನಶೆಟ್ಟಿ, ಬಾಲರಾಜ ರೆಡ್ಡಿ, ಪರಶುರಾಮ ನಾಟೀಕಾರ ಸಭೆಯಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.