ADVERTISEMENT

ವಿಜಯಪುರ: ಗುರಿ ಸಾಧನೆಗೆ ಪ್ರೇರೇಪಿಸಿದ ‘ಗೈಡಿಂಗ್‌ ಫೋರ್ಸ್‌’

ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌ ಪತ್ರಿಕಾ ಸಮೂಹದಿಂದ ಕಾರ್ಯಕ್ರಮ ಆಯೋಜನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 14:25 IST
Last Updated 26 ನವೆಂಬರ್ 2021, 14:25 IST
ವಿಜಯಪುರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಆಯೋಜಿಸಲಾಗಿದ್ದ ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಚಾಲನೆ ನೀಡಿದರು. ‘ಪ್ರಜಾವಾಣಿ’ ಪತ್ರಿಕೆ ಹುಬ್ಬಳ್ಳಿ ಬ್ಯೂರೊ ಮುಖ್ಯಸ್ಥೆ ರಶ್ಮಿ ಎಸ್‌., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ  ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌, ಬೆಂಗಳೂರಿನ ‘ಇನ್‌ಸೈಟ್ಸ್‌ ಐಎಎಸ್‌, ನಿರ್ದೇಶಕ ವಿಜಯಕುಮಾರ್ ಜಿ.ಬಿ.ವ್ಯವಸ್ಥಾಪಕ ಶರತ್‌ಕುಮಾರ್ ಎಸ್‌., ಪ್ರಸರಣ ವಿಭಾಗದ ಸಹಾಯಕ ಮುಖ್ಯ ವ್ಯವಸ್ಥಾಪಕ ಶಿವರಾಜ ನರೋನಾ, ಹಿರಿಯ ಬೋಧಕ ಶಮಂತಗೌಡ, ವ್ಯವಸ್ಥಾಪಕ ಶರತ್‌ಕುಮಾರ್ ಎಸ್‌.  ಇದ್ದಾರೆ–ಪ್ರಜಾವಾಣಿ ಚಿತ್ರ  

ವಿಜಯಪುರ:ಐಎಎಸ್ ಹಾಗೂ ಐಪಿಎಸ್ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕೆಂಬ ಹೆಬ್ಬಯಕೆಯೊಂದಿಗೆಬಂದಿದ್ದ ಜಿಲ್ಲೆಯ ಸಾವಿರಾರು ಯುವಜನ ವಿದ್ಯಾರ್ಥಿಗಳಿಗೆ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಬೆಂಗಳೂರಿನ ‘ಇನ್‌ಸೈಟ್ಸ್‌ ಐಎಎಸ್‌’ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮ ಪ್ರೇರಣಿ ನೀಡಿತು.

ನಗರದಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ’ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮಕ್ಕೆ ಚಾಲನೆ ನೀಡಿದಜಿಲ್ಲಾಧಿಕಾರಿಪಿ.ಸುನೀಲ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸ್ಪರ್ಧಾತ್ಮಕಪರೀಕ್ಷೆಗಳನ್ನು ದಿಟ್ಟವಾಗಿ ಎದುರಿಸುವ ಗುಟ್ಟು ತಿಳಿಸಿಕೊಟ್ಟರು.

‍ಪರೀಕ್ಷೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಎದುರಾಗುವ ಅಡೆ–ತಡೆಗಳನ್ನು ದಾಟುವುದು ಹೇಗೆ? ಕೊನೆಯವರೆಗೆ ಏಕಾಗ್ರತೆ ಕಾಪಾಡಿಕೊಳ್ಳಲು ಏನು ಮಾಡಬೇಕು? ಕೆಲಸ–ಕುಟುಂಬದ ಒತ್ತಡದ ನಡುವೆಯೇ ಪರೀಕ್ಷೆಗೆ ಸಿದ್ಧವಾಗುವುದು ಹೇಗೆ ? ಪರೀಕ್ಷೆ ಬರೆಯುವ ವೇಳೆ ನಮ್ಮ ಯೋಜನೆ ಹೇಗಿರಬೇಕು ಎಂಬಂದನ್ನು ತಿಳಿಸಿದರು. ಜೊತೆಗೆಅಧಿಕಾರಿಗಳಾದ ಬಳಿಕ ಕಾರ್ಯ ವೈಕರಿ ಹೇಗಿರಬೇಕು ಎಂಬುದನ್ನು ತಿಳಿಸಿದರು.

ADVERTISEMENT

ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಸಂಸ್ಥೆಯ ಸಂಸ್ಥಾಪಕ ಮತ್ತು ನಿರ್ದೇಶಕರಾದ ವಿಜಯಕುಮಾರ್ ಜಿ.ಬಿ., ವ್ಯವಸ್ಥಾಪಕ ಶರತ್‌ಕುಮಾರ್ ಎಸ್‌. ಮತ್ತು ಹಿರಿಯ ಬೋಧಕ ಶಮಂತಗೌಡ ಅವರುಸ್ಪರ್ಧಾತ್ಮಕ ಪರೀಕ್ಷೆಗಳಿಗೆತಯಾರಿ, ವಿಷಯ ವಸ್ತು ತಿಳಿಸುವ ಜೊತೆಗೆ ಮಾರ್ಗದರ್ಶನ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗುತ್ತಿರುವವರಷ್ಟೇ ಅಲ್ಲದೆ, ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜು, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಗಳ ಹಾಗೂ ವಿಶ್ವವಿದ್ಯಾಲಯಗಳಿಂದ ಬಂದಿದ್ದ ವಿದ್ಯಾರ್ಥಿ ಯುವಜನರುಸಮಾಧಾನಚಿತ್ತದಿಂದ ಆಲಿಸಿ, ಹೊಸ ಕನಸುಗಳನ್ನು ಹೊತ್ತು ತೆರಳಿದರು.

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ‘ಪ್ರಜಾವಾಣಿ’ ಪತ್ರಿಕೆಯ ಹುಬ್ಬಳ್ಳಿ ಬ್ಯೂರೊ ಮುಖ್ಯಸ್ಥೆ ರಶ್ಮಿ ಎಸ್‌., ಪ್ರಸರಣ ವಿಭಾಗದ ಸಹಾಯಕ ಮುಖ್ಯ ವ್ಯವಸ್ಥಾಪಕ ಶಿವರಾಜ ನರೋನಾ, ಜಾಹೀರಾತು ವಿಭಾಗದ ಸಹಾಯಕ ಮುಖ್ಯ ವ್ಯವಸ್ಥಾಪಕ ದಿವಾಕರ ಭಟ್‌ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಂಜಲಿ, ಹರಿಪ್ರಿಯಾ ಪ್ರಾರ್ಥನಾ ಗೀತೆ ಹಾಡಿದರು. ಎಚ್‌.ಎಂ.ಮಮದಾಪುರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.